alex Certify ಬಿಗ್ ನ್ಯೂಸ್: ಅಮೆರಿಕಾ ಉಪಾಧ್ಯಕ್ಷ ಚುನಾವಣೆಗೆ ಕಮಲಾ ಹ್ಯಾರಿಸ್ ಸ್ಪರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಅಮೆರಿಕಾ ಉಪಾಧ್ಯಕ್ಷ ಚುನಾವಣೆಗೆ ಕಮಲಾ ಹ್ಯಾರಿಸ್ ಸ್ಪರ್ಧೆ

ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಾಟ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್, ಉಪಾಧ್ಯಕ್ಷ ಸ್ಥಾನಕ್ಕೆ ತಮ್ಮ ಪಕ್ಷದ ಸ್ಪರ್ಧಿಯಾಗಿ ಕಮಲಾ ಹ್ಯಾರಿಸ್ ಅವರ ಹೆಸರನ್ನು ಘೋಷಿಸಿದ್ದಾರೆ.

ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ಜೋ ಬಿಡೆನ್ ಈ ಘೋಷಣೆ ಮಾಡಿದ್ದು, ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿರುವ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಲು ಸಂತಸವಾಗುತ್ತದೆ ಎಂದು ತಿಳಿಸಿದ್ದಾರೆ.

ಕಮಲಾ ಹ್ಯಾರಿಸ್ ಅವರ ತಂದೆ ಜಮೈಕಾ ಮೂಲದವರಾಗಿದ್ದು, ತಾಯಿ ಭಾರತೀಯೆ. ಬಹಳಷ್ಟು ವರ್ಷಗಳಿಂದ ಅಮೆರಿಕಾದ ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಕಮಲಾ ಹ್ಯಾರಿಸ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...