
ಆಘಾತಕಾರಿ ಘಟನೆಯೊಂದರಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ನೂರಾರು ಶಾಲಾ ವಿದ್ಯಾರ್ಥಿಗಳನ್ನು ಅಪಹರಣ ಮಾಡಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ. ಆದರೆ ಎಷ್ಟು ಮಂದಿಯನ್ನು ಅಪಹರಿಸಲಾಗಿದೆ ಎಂಬ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ವಾಯುವ್ಯ ನೈಜೀರಿಯಾದ zamfara ರಾಜ್ಯದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ರಾಜ್ಯಪಾಲರ ವಕ್ತಾರರು ಘಟನೆಯನ್ನು ಖಚಿತಪಡಿಸಿದ್ದಾರೆ.
ಫೆಬ್ರವರಿ 18ರಂದು ಸಹ ನೈಜೀರಿಯಾದ ಕಗರಾ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯನ್ನು ಶಸ್ತ್ರಸಜ್ಜಿತ ಬಂಡುಕೋರರು ಅಪಹರಿಸಿದ್ದರು. ಈಗ ಮತ್ತೆ ಅಂತಹುದೇ ಘಟನೆ ನಡೆದಿರುವುದು ನೈಜೀರಿಯಾ ಜನತೆಯನ್ನು ಬೆಚ್ಚಿಬೀಳಿಸಿದೆ.