alex Certify ಕೊರೋನಾ ವಿರುದ್ಧದ ಹೋರಾಟದಲ್ಲಿ ಬಹುದೊಡ್ಡ ಯಶಸ್ಸು, ರೆಡಿಯಾಯ್ತು ಲಸಿಕೆ – ಮಂಗನ ಮೇಲಿನ ಪ್ರಯೋಗ ಯಶಸ್ವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ವಿರುದ್ಧದ ಹೋರಾಟದಲ್ಲಿ ಬಹುದೊಡ್ಡ ಯಶಸ್ಸು, ರೆಡಿಯಾಯ್ತು ಲಸಿಕೆ – ಮಂಗನ ಮೇಲಿನ ಪ್ರಯೋಗ ಯಶಸ್ವಿ

 ಲಂಡನ್: ಆಕ್ಸಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಪ್ರಯೋಗ ಯಶಸ್ವಿಯಾಗಿದ್ದು ಕೊರೋನಾ ಲಸಿಕೆ ಭರವಸೆ ಮೂಡಿಸಿದೆ. ಮಂಗಗಳ ಮೇಲೆ ನಡೆಸಲಾದ ಪ್ರಯೋಗ ಯಶಸ್ವಿಯಾಗಿದೆ ಎಂದು ಸಂಶೋಧಕ ಡಾ. ಪೆನ್ನಿವಾರ್ಡ್ ತಿಳಿಸಿದ್ದಾರೆ.

ಕೊರೋನಾ ವೈರಾಣು ನಿಯಂತ್ರಣದ ಲಸಿಕೆಯನ್ನು ಸಂಶೋಧನೆಯ ಭಾಗವಾಗಿ ಮಂಗಗಳ ಮೇಲೆ ಪ್ರಯೋಗಿಸಲಾಗಿದೆ. ಪ್ರಯೋಗದಲ್ಲಿ ವೈರಾಣು ನಿಯಂತ್ರಣ ಲಕ್ಷಣಗಳು ಕಂಡುಬಂದಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಏಷ್ಯಾ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಕಂಡುಬರುವ ಮಕಾಕಾ ಪ್ರಭೇದದ ಮಂಗಗಳ ಮೇಲೆ ಈ ಲಸಿಕೆಯನ್ನು ಪ್ರಯೋಗಿಸಲಾಗಿದೆ. ಶ್ವಾಸಕೋಶಕ್ಕೆ ಹಾನಿ ಉಂಟು ಮಾಡದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ, ಇದರಿಂದ ಅಡ್ಡ ಪರಿಣಾಮಗಳು ಕೂಡ ಉಂಟಾಗಿಲ್ಲ.

6 ಮಂಗಗಳ ಮೇಲೆ ಲಸಿಕೆ ಪ್ರಯೋಗಿಸಿದ್ದು ಮಂಗಗಳ ಉಸಿರಾಟ, ಶ್ವಾಸಕೋಶ, ನ್ಯುಮೋನಿಯಾ ಲಕ್ಷಣಗಳನ್ನು ಪರಿಶೀಲಿಸಿದಾಗ ಮಂಗಗಳಲ್ಲಿ ರೋಗನಿರೋಧಕ ಶಕ್ತಿ ಕಂಡು ಬಂದಿದೆ. ಈ ಪ್ರಯೋಗ ಯಶಸ್ವಿಯಾಗಿದ್ದು ಮುಂದಿನ ಹಂತದಲ್ಲಿ ಮನುಷ್ಯರ ಮೇಲೆ ಪ್ರಯೋಗ ಮಾಡಲಾಗುವುದು. ಫಲಿತಾಂಶದ ಬಳಿಕ ಪ್ರಯೋಗ ಸಂಪೂರ್ಣ ಯಶಸ್ವಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...