alex Certify ಭಾರತಕ್ಕೆ ದೊಡ್ಡ ಜಯ: ನೀರವ್‌ ಮೋದಿ ಹಸ್ತಾಂತರಕ್ಕೆ ಬ್ರಿಟನ್‌ ನ್ಯಾಯಾಲಯದ ಗ್ರೀನ್‌ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತಕ್ಕೆ ದೊಡ್ಡ ಜಯ: ನೀರವ್‌ ಮೋದಿ ಹಸ್ತಾಂತರಕ್ಕೆ ಬ್ರಿಟನ್‌ ನ್ಯಾಯಾಲಯದ ಗ್ರೀನ್‌ ಸಿಗ್ನಲ್

ಪಂಜಾಬ್​ ನ್ಯಾಷನಲ್​ ಬ್ಯಾಂಕ್​ಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭಾರತೀಯ ಉದ್ಯಮಿ ನೀರವ್​ ಮೋದಿಯನ್ನ ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಯುಕೆ ನ್ಯಾಯಾಧೀಶರು ತೀರ್ಪನ್ನ ನೀಡಿದ್ದಾರೆ. ಅಲ್ಲದೇ ಇದೇ ವೇಳೆ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಹಾಗೂ ಭಾರತೀಯ ಜೈಲಿನ ಪರಿಸ್ಥಿತಿಯಿಂದ ಅವರ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂಬ ವಾದಗಳನ್ನ ತಳ್ಳಿ ಹಾಕಿದ್ದಾರೆ.

ನೀರವ್​ ಮೋದಿಯನ್ನ ಭಾರತಕ್ಕೆ ಹಸ್ತಾಂತರಿಸೋದು ಮಾನವ ಹಕ್ಕುಗಳಿಗೆ ಪೂರಕವಾಗಿಯೇ ಇದೆ ಎಂಬುದಕ್ಕೆ ನನಗೆ ತೃಪ್ತಿ ಇದೆ ಎಂದು ಜಿಲ್ಲಾ ನ್ಯಾಯಾಧೀಶ ಸ್ಯಾಮುವಲ್​ ಗೂಝೆ ಹೇಳಿದ್ದಾರೆ. ಅಲ್ಲದೇ ಈ ತೀರ್ಪಿನ ಸಂಬಂಧ ನೀರವ್​ ಮೋದಿ ಮೇಲ್ಮನವಿ ಸಲ್ಲಿಸಬಹುದು ಎಂದೂ ಇದೇ ವೇಳೆ ನ್ಯಾಯಾಧೀಶರು ಮಾಹಿತಿ ನೀಡಿದ್ದಾರೆ.

ನೀರವ್​ ಮೋದಿಯನ್ನ ಭಾರತಕ್ಕೆ ಹಸ್ತಾಂತರಿಸಿದರೆ ಅವರಿಗೆ ನ್ಯಾಯ ದೊರೆಯೋದಿಲ್ಲ ಎಂಬ ವಾದಕ್ಕೆ ಯಾವುದೇ ಪುರಾವೆ ಇಲ್ಲ ಅಂತಾ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...