
ಇಮ್ರಾನ್ ಖಾನ್ ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಹ ಮುಂಜಾಗೃತಾ ಕ್ರಮವಾಗಿ ಐಸೋಲೇಶನ್ ಗೆ ಒಳಗಾಗಿದ್ದು, ವೈದ್ಯರು ಅವರ ಆರೋಗ್ಯದ ಕುರಿತು ತೀವ್ರ ನಿಗಾ ಇರಿಸಿದ್ದಾರೆ.
ಪಾಕಿಸ್ತಾನದಲ್ಲಿ ಈ ಮೊದಲು ಸಹ ಕೊರೊನಾ ಸೋಂಕು ಉಲ್ಬಣಿಸಿದ್ದು, ಇತ್ತೀಚೆಗಷ್ಟೇ ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಲಸಿಕೆಯನ್ನು ಕಳುಹಿಸಿಕೊಟ್ಟಿವೆ.
ಅಚ್ಚರಿಯ ಸಂಗತಿ ಎಂದರೆ ಇಮ್ರಾನ್ ಖಾನ್ ಇತ್ತೀಚೆಗೆ ಚೀನಾದ ಸಿನೋಫಾರ್ಮ್ ವ್ಯಾಕ್ಸಿನ್ ಪಡೆದುಕೊಂಡಿದ್ದು, ಲಸಿಕೆ ಪಡೆದ 48 ಗಂಟೆಯೊಳಗಾಗಿ ಕೊರೊನಾ ಪಾಸಿಟಿವ್ ಬಂದಿದೆ.