alex Certify BREAKING : ಪಾಕಿಸ್ತಾನದಲ್ಲಿ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ : 31 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಾಕಿಸ್ತಾನದಲ್ಲಿ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ : 31 ಮಂದಿಗೆ ಗಾಯ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯ ರೈಲ್ವೆ ಮಾರ್ಗದಲ್ಲಿ ನಿಲ್ಲಿಸಿದ್ದ ಸರಕು ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 31 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶೇಖುಪುರ ಜಿಲ್ಲೆಯ ಕಿಲಾ ಸತ್ತಾರ್ ಶಾ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.ಮಿಯಾನ್ವಾಲಿಯಿಂದ ಲಾಹೋರ್ಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಈಗಾಗಲೇ ಸರಕು ರೈಲು ನಿಲ್ಲಿಸಿದ್ದ ಅದೇ ಟ್ರ್ಯಾಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿದೆ. . ಅಪಘಾತದಲ್ಲಿ 31 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ. ಗಾಯಗೊಂಡ ಐವರು ಪ್ರಯಾಣಿಕರನ್ನು ಜಿಲ್ಲಾ ಪ್ರಧಾನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.ಅಪಘಾತದ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ನಂತರ ಲಾಹೋರ್ ವಿಭಾಗದಲ್ಲಿ ರೈಲು ಕಾರ್ಯಾಚರಣೆ ಸುಗಮವಾಗಿ ನಡೆಯುತ್ತಿದೆ,
ಅಪಘಾತದ ನಂತರ ಟ್ರ್ಯಾಕ್ ಅನ್ನು ತೆರವುಗೊಳಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...