ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದ ರಷ್ಯಾದ ಕೊರೊನಾ ಲಸಿಕೆಯ ಮೂರನೇ ಹಂತದ ಮಾನವ ಪ್ರಯೋಗ 7 ದಿನಗಳಲ್ಲಿ ಶುರುವಾಗಲಿದೆ. ಸ್ಪುಟ್ನಿಕ್ ವಿ ಕೊರೊನಾ ಲಸಿಕೆಯ ಮಾನವ ಪ್ರಯೋಗ ಮುಂದಿನ 7 ದಿನಗಳಲ್ಲಿ ಪ್ರಾರಂಭವಾಗಬಹುದು ಎನ್ನಲಾಗಿದೆ. ಈ ಲಸಿಕೆ ಕೊರೊನಾ ವೈರಸ್ ಕೊಲ್ಲುವಲ್ಲಿ ಪರಿಣಾಮಕಾರಿಯಾಗಿದೆ ಎಂದು ರಷ್ಯಾ ವಿಡಿಯೋ ಒಂದರಲ್ಲಿ ಹೇಳಿದೆ.
ಮೆಕ್ಸಿಕೊದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್, ರಷ್ಯಾದ ಲಸಿಕೆ ಪರಿಣಾಮಕಾರಿ ಎಂದು ಸಾಬೀತಾದರೆ, ಸ್ವತಃ ತಾವೇ ಲಸಿಕೆ ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. ಈ ಹಿಂದೆ ಫಿಲಿಪೈನ್ಸ್ ಅಧ್ಯಕ್ಷರು ಕೂಡ ಇದೇ ಹೇಳಿಕೆ ನೀಡಿದ್ದರು.
ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಜ್ಞಾನಿಗಳು ರಷ್ಯಾ ಲಸಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ರಷ್ಯಾ ಈಗ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಕೊರೊನಾ ವೈರಸನ್ನು ಲಸಿಕೆ ಹೇಗೆ ಕೊಲ್ಲುತ್ತದೆ ಎಂಬುದನ್ನು ವಿವರಿಸಲಾಗಿದೆ.