alex Certify BIG NEWS: 3 ನೇ ಹಂತದ ಕೊರೊನಾ ಲಸಿಕೆ ಪರೀಕ್ಷೆ ಕುರಿತು ರಷ್ಯಾದಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ನೇ ಹಂತದ ಕೊರೊನಾ ಲಸಿಕೆ ಪರೀಕ್ಷೆ ಕುರಿತು ರಷ್ಯಾದಿಂದ ಮಹತ್ವದ ಮಾಹಿತಿ

ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದ ರಷ್ಯಾದ ಕೊರೊನಾ ಲಸಿಕೆಯ ಮೂರನೇ ಹಂತದ ಮಾನವ ಪ್ರಯೋಗ 7 ದಿನಗಳಲ್ಲಿ ಶುರುವಾಗಲಿದೆ. ಸ್ಪುಟ್ನಿಕ್ ವಿ ಕೊರೊನಾ ಲಸಿಕೆಯ ಮಾನವ ಪ್ರಯೋಗ ಮುಂದಿನ 7 ದಿನಗಳಲ್ಲಿ ಪ್ರಾರಂಭವಾಗಬಹುದು ಎನ್ನಲಾಗಿದೆ. ಈ ಲಸಿಕೆ ಕೊರೊನಾ ವೈರಸ್ ಕೊಲ್ಲುವಲ್ಲಿ ಪರಿಣಾಮಕಾರಿಯಾಗಿದೆ ಎಂದು ರಷ್ಯಾ ವಿಡಿಯೋ ಒಂದರಲ್ಲಿ ಹೇಳಿದೆ.

ಮೆಕ್ಸಿಕೊದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್, ರಷ್ಯಾದ ಲಸಿಕೆ ಪರಿಣಾಮಕಾರಿ ಎಂದು ಸಾಬೀತಾದರೆ, ಸ್ವತಃ ತಾವೇ ಲಸಿಕೆ ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. ಈ ಹಿಂದೆ ಫಿಲಿಪೈನ್ಸ್ ಅಧ್ಯಕ್ಷರು ಕೂಡ ಇದೇ ಹೇಳಿಕೆ ನೀಡಿದ್ದರು.

ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಜ್ಞಾನಿಗಳು ರಷ್ಯಾ ಲಸಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ರಷ್ಯಾ ಈಗ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಕೊರೊನಾ ವೈರಸನ್ನು ಲಸಿಕೆ ಹೇಗೆ ಕೊಲ್ಲುತ್ತದೆ ಎಂಬುದನ್ನು ವಿವರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...