ಸೌದಿ ಅರೇಬಿಯಾದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗ್ತಿದೆ. ಸೌದಿ ಅರೇಬಿಯಾದಲ್ಲಿ ಪ್ರಯಾಣ ನಿರ್ಬಂಧಗಳನ್ನು ಉಲ್ಲಂಘಿಸುವವರಿಗೆ ಭಾರಿ ದಂಡ ವಿಧಿಸಲಾಗುವುದು ಎಂದು ಸರ್ಕಾರ ಸ್ಪಷ್ಟ ಎಚ್ಚರಿಕೆ ನೀಡಿದೆ.
ಈ ಮೊದಲು ನಿಯಮಗಳನ್ನು ಉಲ್ಲಂಘಿಸಿದವರಿಗೆ ಸರ್ಕಾರ 3 ವರ್ಷಗಳ ಪ್ರಯಾಣ ನಿಷೇಧವನ್ನು ಘೋಷಿಸಿತ್ತು. ವಿದೇಶಕ್ಕೆ ಪ್ರಯಾಣ ಬೆಳೆಸುವವರು ಕೊರೊನಾ ಹರಡುತ್ತಾರೆಂಬ ಭಯವಿದೆ. ಪ್ರಯಾಣದ ನಿಯಮ ಉಲ್ಲಂಘಿಸುವ ಪ್ರಯಾಣಿಕರಿಗೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ದಂಡದ ಮೊತ್ತ ತಲೆತಿರುಗುವಂತಿದೆ. ಎರಡನೇ ಬಾರಿ ಕೊರೊನಾದಿಂದ ತತ್ತರಿಸಿರುವ ದೇಶಕ್ಕೆ ಪ್ರಯಾಣ ಬೆಳೆಸಿದ ಪ್ರಯಾಣಿಕರಿಗೆ 1 ಕೋಟಿ ರೂಪಾಯಿ ದಂಡ ವಿಧಿಸುವುದಾಗಿ ಸರ್ಕಾರ ಹೇಳಿದೆ.
ಭಾನುವಾರ ಈ ಕುರಿತು ಟ್ವೀಟ್ ಮಾಡಿರುವ ಅಧಿಕಾರಿಗಳು, ಸೌದಿ ಅರೇಬಿಯಾದ ಕೊರೊನಾ ಟ್ರಾವೆಲ್ ಬ್ಯಾನ್ ಲಿಸ್ಟ್ ನಲ್ಲಿ ಸೇರಿಕೊಂಡಿರುವ ಯಾವುದೇ ದೇಶಕ್ಕೆ ಪ್ರಯಾಣಿಸಿದ ಪ್ರಯಾಣಿಕರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
ಈ ಪಟ್ಟಿಯಲ್ಲಿ ಭಾರತ, ಪಾಕಿಸ್ತಾನ, ಯುನೈಟೆಡ್ ಅರಬ್ ಎಮಿರೇಟ್ಸ್ ಇತ್ಯಾದಿ ದೇಶಗಳು ಸೇರಿವೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಾಗ ನಿಷೇಧವನ್ನು ತೆಗೆದುಹಾಕಲಾಗುವುದು ಎಂದು ಸೌದಿ ಸರ್ಕಾರ ಹೇಳಿದೆ.