alex Certify ಹರಾಜಿಗಿಟ್ಟ ಬ್ಯಾಟ್ ಖರೀದಿಸಿದ ಹಿರಿಯ ಕ್ರಿಕೆಟಿಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹರಾಜಿಗಿಟ್ಟ ಬ್ಯಾಟ್ ಖರೀದಿಸಿದ ಹಿರಿಯ ಕ್ರಿಕೆಟಿಗ

ವಿಶ್ವದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಹಾಮಾರಿಗೆ ಈಗಾಗಲೇ ಮೂರು ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 45 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅಮೆರಿಕಾ ಒಂದರಲ್ಲೇ 87 ಸಾವಿರ ಮಂದಿ ಮೃತಪಟ್ಟಿದ್ದಾರೆ.

ಬಾಂಗ್ಲಾದೇಶ ಕೂಡಾ ಕೊರೊನಾ ಸೋಂಕಿನಿಂದ ಬಾಧಿತವಾಗಿದ್ದು, ಹೀಗಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಅಲ್ಲದೆ ಸೋಂಕಿತರ ಚಿಕಿತ್ಸೆಗಾಗಿ ನಿರಂತರ ಪ್ರಯತ್ನ ನಡೆದಿದೆ. ಹೀಗಾಗಿ ಪೀಡಿತರ ನೆರವಿಗೆ ಬಾಂಗ್ಲಾದೇಶ ಕ್ರಿಕೆಟಿಗ ಮುಷ್ಫಿಕುರ್ ರಹೀಮ್ ಮುಂದಾಗಿದ್ದಾರೆ.

ಇದಕ್ಕಾಗಿ 2013ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ಬ್ಯಾಟನ್ನು ಮುಷ್ಫಿಕುರ್ ರಹೀಮ್ ಹರಾಜಿಗಿಟ್ಟಿದ್ದು, ಇದನ್ನು ಹಿರಿಯ ಪಾಕ್ ಕ್ರಿಕೆಟಿಗ ಶಾಹೀದ್ ಆಫ್ರಿದಿ, 15.17 ಲಕ್ಷ ರೂಪಾಯಿಗಳಿಗೆ ಖರೀದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...