ಕೊರೋನಾ ಸೋಂಕಿನ ಎರಡನೇ ಅಲೆ ವ್ಯಾಪಿಸಿ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಫ್ರಾನ್ಸ್ ಮಹಾನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಗ್ರೆನೋಬಲ್, ಲಿಲ್ಲೆ, ರೂಯೆನ್, ಸೇಂಟ್ ಎಟಿನ್ನೆ ಸೇರಿದಂತೆ 8 ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರು ಕರ್ಫ್ಯೂ ಘೋಷಣೆ ಮಾಡಿದ್ದಾರೆ.
ದೂರದರ್ಶನದ ಸಂದರ್ಶನವೊಂದರಲ್ಲಿ ಅವರು ಈ ಬಗ್ಗೆ ಮಾತನಾಡಿ, ಸಾಂಕ್ರಾಮಿಕ ರೋಗದ ಎರಡನೇ ಅಲೆ ಫ್ರಾನ್ಸ್ ನಲ್ಲಿ ತಲ್ಲಣ ತಂದಿದೆ. ಪ್ರತಿದಿನ ಸರಾಸರಿ 20 ಸಾವಿರ ಹೊಸ ಪ್ರಕರಣ ಬೆಳಕಿಗೆ ಬರುತ್ತಿವೆ. ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯಲು ಮಹಾನಗರಗಳಲ್ಲಿ ಕಠಿಣ ನಿಯಮ ಜಾರಿ ಮಾಡುವುದು ಅನಿವಾರ್ಯವಾಗಿದೆ. ಇದರ ಭಾಗವಾಗಿ ಮಹಾನಗರಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಅವಧಿಯಲ್ಲಿ ಅನಗತ್ಯ ಓಡಾಟ ನಿರ್ಬಂಧಿಸಲಾಗಿದೆ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.