
ವಾಷಿಂಗ್ಟನ್: ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಅಮೆರಿಕ ಹಿಂಪಡೆದಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೀಸಾ ರದ್ದು ಆದೇಶವನ್ನು ಹಿಂಪಡೆದುಕೊಂಡಿದ್ದಾರೆ. ಆನ್ಲೈನ್ ಶಿಕ್ಷಣ ಪಡೆಯುತ್ತಿರುವವರಿಗೆ ವೀಸಾ ನೀಡುವುದಿಲ್ಲ ಎನ್ನಲಾಗಿತ್ತು. ಅಕ್ಟೋಬರ್ ಬಳಿಕ ಹೊಸ ವೀಸಾಗಳನ್ನು ನೀಡುವುದಿಲ್ಲ ಎಂದು ಹೇಳಲಾಗಿತ್ತು.
ಅಮೆರಿಕ ವಲಸೆ ಮತ್ತು ಕಸ್ಟಮ್ ವಿಭಾಗ ಈ ಕುರಿತಾಗಿ ಆದೇಶ ಹೊರಡಿಸಿತ್ತು. ವೀಸಾ ರದ್ದು ಆದೇಶವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂಪಡೆದುಕೊಂಡಿದ್ದಾರೆ. ಈ ಮೂಲಕ ಆನ್ ಲೈನ್ ಶಿಕ್ಷಣ ಪಡೆಯುತ್ತಿರುವವರಿಗೆ ವೀಸಾ ನೀಡುವುದಿಲ್ಲ ಎನ್ನುವ ಆದೇಶವನ್ನು ಅಮೆರಿಕ ಹಿಂಪಡೆದುಕೊಂಡಿದೆ.