
ಅಮೆರಿಕದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಿದ್ದರೂ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಸ್ಕ್ ಧರಿಸಿರಲಿಲ್ಲ.
ಕೊರೊನಾ ಬಗ್ಗೆ ನಿರ್ಲಕ್ಷ ತೋರುತ್ತಿದ್ದ ಅವರು ಎರಡು ಸಲ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದು ನೆಗೆಟಿವ್ ವರದಿ ಬಂದಿದೆ. ಈಗ ಮೊದಲ ಬಾರಿಗೆ ಮಾಸ್ಕ್ ಧರಿಸಿಕೊಂಡು ಡೊನಾಲ್ಡ್ ಟ್ರಂಪ್ ಸೇನಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಕೊರೊನಾ ಸೋಂಕು ಅಮೆರಿಕದಲ್ಲಿ ತೀವ್ರ ತಲ್ಲಣವನ್ನುಂಟು ಮಾಡಿದ್ದರೂ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದ ಟ್ರಂಪ್ ಇದೇ ಮೊದಲ ಬಾರಿಗೆ ಮಾಸ್ಕ್ ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.