alex Certify ಕೊರೊನಾದಿಂದ ಸಂಪೂರ್ಣ ಗುಣಮುಖವಾಗದಿದ್ರೂ ಆಸ್ಪತ್ರೆಯಿಂದ ಟ್ರಂಪ್ ಡಿಸ್ಚಾರ್ಜ್, ಕಾರಣ ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾದಿಂದ ಸಂಪೂರ್ಣ ಗುಣಮುಖವಾಗದಿದ್ರೂ ಆಸ್ಪತ್ರೆಯಿಂದ ಟ್ರಂಪ್ ಡಿಸ್ಚಾರ್ಜ್, ಕಾರಣ ಗೊತ್ತಾ..?

ವಾಷಿಂಗ್ಟನ್: ಕೊರೊನಾದಿಂದ ಸಂಪೂರ್ಣ ಗುಣಮುಖರಾಗದಿದ್ದರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಶ್ವೇತ ಭವನಕ್ಕೆ ಆಗಮಿಸಿದ್ದಾರೆ.

ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರದಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕೋವಿಡ್ ನಿಂದ ಗುಣಮುಖರಾಗದ ಅವರು ಶ್ವೇತಭವನಕ್ಕೆ ಆಗಮಿಸಿದ್ದಾರೆ. ವಾಲ್ಟರ್ ರೀಡ್ ಮಿಲಿಟರಿ ವೈದ್ಯಕೀಯ ಕೇಂದ್ರದಿಂದ ಸೇನಾ ಹೆಲಿಕಾಪ್ಟರ್ ನಲ್ಲಿ ಶ್ವೇತಭವನಕ್ಕೆ ಮರಳಿದ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುವುದು.

ಡೊನಾಲ್ಡ್ ಟ್ರಂಪ್ ಅವರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ ಎಂದು ಶ್ವೇತಭವನದ ವೈದ್ಯ ಡಾ. ಸೀನ್ ಕಾನ್ಲೆ ಹೇಳಿದ್ದಾರೆ. ಶ್ವೇತಭವನಕ್ಕೆ ಆಗಮಿಸಿದ ಕೂಡಲೇ ಡೊನಾಲ್ಡ್ ಟ್ರಂಪ್ ಮಾಸ್ಕ್ ತೆಗೆದು ತಾವು ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ.

ನನ್ನ ಆರೋಗ್ಯ 20 ವರ್ಷ ಹಿಂದಿಗಿಂತ ಈಗ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ. ಸಂಪೂರ್ಣವಾಗಿ ಗುಣಮುಖರಾಗದಿದ್ದರೂ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಹೊರಬಂದ ಅವರು ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...