ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಹಕ್ಕು ಪ್ರತಿಪಾದಿಸುತ್ತಿರುವುದಕ್ಕೆ ಅಮೆರಿಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದು ಕಾನೂನು ವಿರೋಧಿಯಾಗಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ.
ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಹಕ್ಕು ಪ್ರತಿಪಾದಿಸುತ್ತಿರುವ ಬಗ್ಗೆ ಮಾತನಾಡಿದ ಮೈಕ್ ಪಾಂಪಿಯೋ, ಚೀನಾದ ನಡೆದ ಕಾನೂನು ವಿರೋಧಿಯಾಗಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಶಾಂತಿ, ಸ್ಥಿರತೆಯನ್ನು ನಾವು ಬಯಸುತ್ತೇವೆ ಎಂದು ತಿಳಿಸಿದ್ದಾರೆ.
ಆದರೆ, ಈ ಕುರಿತಾದ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಸೇನೆ ಬಳಕೆಯನ್ನು ಅಮೆರಿಕ ವಿರೋಧಿಸುತ್ತದೆ ಎಂದು ಹೇಳಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳಿಗೆ ಚೀನಾ ಬೆದರಿಕೆ ಹಾಕುತ್ತಿದೆ. ಸಮುದ್ರದ ಮೇಲೆ ಏಕಸ್ವಾಮ್ಯ ಹಕ್ಕು ಸಾಧಿಸಲು ಯತ್ನಿಸುತ್ತಿದೆ. ಬಹಳ ವರ್ಷಗಳಿಂದ ಚೀನಾ ದಕ್ಷಿಣ ಚೀನಾ ಸಮುದ್ರದ ಮೇಲೆ ಹಕ್ಕು ಸಾಧಿಸಲು ಯತ್ನಿಸತ್ತಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಚೀನಾಗೆ ಮೈಕ್ ಪಾಂಪಿಯೋ ಖಡಕ್ ವಾರ್ನಿಂಗ್ ಮಾಡಿದ್ದಾರೆ.