ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗಣರಾಜ್ಯೋತ್ಸವ ದಿನದಂದು ಭಾರತ ಭೇಟಿಯನ್ನ ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಗೆ ಕರೆ ಮಾಡಿ ಮಾಹಿತಿ ತಿಳಿಸಿರುವ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡಲಾಗದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಬ್ರಿಟನ್ನಲ್ಲಿ ರೂಪಾಂತರಿ ಕೊರೊನಾ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆ ಬೋರಿಸ್ ಜಾನ್ಸನ್ ತಮ್ಮ ಭೇಟಿಯನ್ನ ರದ್ದು ಮಾಡಿದ್ದಾರೆ ಎಂದು ಹೇಳಲಾಗಿದೆ.
ಇಂದು ಬೆಳಗ್ಗೆ ಪ್ರಧಾನಿಗೆ ಕರೆ ಮಾಡಿದ ಬೋರಿಸ್ ಜೋನ್ಸನ್ ಈ ಬಾರಿ ಗಣರಾಜ್ಯೋತ್ಸವಕ್ಕೆ ಭೇಟಿ ನೀಡಲು ಸಾಧ್ಯವಾಗದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಬ್ರಿಟನ್ ವಕ್ತಾರ ಡೋವ್ನಿಂಗ್ ಸ್ಟ್ರೀಟ್ ಹೇಳಿದ್ದಾರೆ. ಬೋರಿಸ್ ಜಾನ್ಸನ್ ಜನವರಿ ಮಧ್ಯಂತರದಲ್ಲಿ ಭಾರತಕ್ಕೆ ಭೇಟಿ ನೀಡ್ತಾರೆ ಎನ್ನಲಾಗಿತ್ತು.
ಅಲ್ಲದೇ ಈ ವರ್ಷದ ಮೊದಲಾರ್ಧದಲ್ಲಿ ಭಾರತಕ್ಕೆ ಬೋರಿಸ್ ಜಾನ್ಸನ್ ಭೇಟಿ ನೀಡುವ ಬಗ್ಗೆ ಬ್ರಿಟನ್ ಸರ್ಕಾರ ಅಭಯ ನೀಡಿದೆ, ಜಿ 7 ಶೃಂಗಸಭೆಗೂ ಮುನ್ನ ಪ್ರಧಾನಿ ಮೋದಿ ಹಾಗೂ ಬೋರಿಸ್ ಜಾನ್ಸನ್ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಮುಂದಿನ ವರ್ಷ ಬ್ರಿಟನ್ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ಮೋದಿಗೆ ಬೋರಿಸ್ ಜಾನ್ಸನ್ ಆಹ್ವಾನಿಸಿದ್ದಾರೆ.