ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಅಧ್ಯಕ್ಷ ಸ್ಥಾನದ ಕಣಕ್ಕಿಳಿದಿರುವ ಜೋ ಬಿಡೆನ್ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮೆರಿಕದಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಜೋ ಬಿಡೆನ್ರಿಗೆ ಈ ಬಾರಿಯ ಅಧ್ಯಕ್ಷಗಾದಿ ಅಂತಾ ಹೇಳಲಾಗ್ತಿದೆ.
ಈ ನಡುವೆ ಮಧ್ಯರಾತ್ರಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ್ದು , ನಾವು ಈ ಬಾರಿಯ ಚುನಾವಣೆಯಲ್ಲಿ ಸರಿಯಾದ ಹಾದಿಯಲ್ಲಿ ನಡೆಯುತ್ತಿದ್ದೇವೆ ಎಂಬ ನಂಬಿಕೆ ನನಗಿದೆ. ನಂಬಿ ಗೆಳೆಯರೇ, ನಾವೇ ಈ ಚುನಾವಣೆಯನ್ನ ಗೆಲ್ಲಲಿದ್ದೇವೆ ಅಂತಾ ಹೇಳಿದ್ದಾರೆ.
ಈ ಹಿಂದೆ ಬರಾಕ್ ಒಬಾಮಾ ಅಧ್ಯಕ್ಷರಾಗಿದ್ದ ವೇಳೆ 77 ವರ್ಷದ ಬಿಡೆನ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2020ರಲ್ಲಿ ಬಿಡೆನ್ ಅಮೆರಿಕ ಅಧ್ಯಕ್ಷ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ.