alex Certify ಈ ಸಲ ಗೆಲುವು ನಮ್ಮದೇ ಎಂದ ಜೋ ಬಿಡೆನ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಲ ಗೆಲುವು ನಮ್ಮದೇ ಎಂದ ಜೋ ಬಿಡೆನ್​

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್​ ಪಕ್ಷದಿಂದ ಅಧ್ಯಕ್ಷ ಸ್ಥಾನದ ಕಣಕ್ಕಿಳಿದಿರುವ ಜೋ ಬಿಡೆನ್​ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಜೋ ಬಿಡೆನ್​ರಿಗೆ ಈ ಬಾರಿಯ ಅಧ್ಯಕ್ಷಗಾದಿ ಅಂತಾ ಹೇಳಲಾಗ್ತಿದೆ.

ಈ ನಡುವೆ ಮಧ್ಯರಾತ್ರಿ ಡೆಮಾಕ್ರಟಿಕ್​ ಪಕ್ಷದ ಜೋ ಬಿಡೆನ್​ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ್ದು , ನಾವು ಈ ಬಾರಿಯ ಚುನಾವಣೆಯಲ್ಲಿ ಸರಿಯಾದ ಹಾದಿಯಲ್ಲಿ ನಡೆಯುತ್ತಿದ್ದೇವೆ ಎಂಬ ನಂಬಿಕೆ ನನಗಿದೆ. ನಂಬಿ ಗೆಳೆಯರೇ, ನಾವೇ ಈ ಚುನಾವಣೆಯನ್ನ ಗೆಲ್ಲಲಿದ್ದೇವೆ ಅಂತಾ ಹೇಳಿದ್ದಾರೆ.

ಈ ಹಿಂದೆ ಬರಾಕ್​ ಒಬಾಮಾ ಅಧ್ಯಕ್ಷರಾಗಿದ್ದ ವೇಳೆ 77 ವರ್ಷದ ಬಿಡೆನ್​​ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2020ರಲ್ಲಿ ಬಿಡೆನ್​ ಅಮೆರಿಕ ಅಧ್ಯಕ್ಷ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...