alex Certify ಕೊರೋನಾ ಶಾಕಿಂಗ್ ನ್ಯೂಸ್: ಸಾವಿನ ಮನೆಯಾದ ಅಮೆರಿಕ, ದಿನಕ್ಕೆ 2,000 ಮಂದಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಶಾಕಿಂಗ್ ನ್ಯೂಸ್: ಸಾವಿನ ಮನೆಯಾದ ಅಮೆರಿಕ, ದಿನಕ್ಕೆ 2,000 ಮಂದಿ ಬಲಿ

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ದಿನಕ್ಕೆ ಸರಾಸರಿ ಎರಡು ಸಾವಿರ ಮಂದಿ ಸಾವನ್ನಪ್ಪುತ್ತಿದ್ದಾರೆ.

ಅಮೆರಿಕದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಸುಮಾರು 9 ಲಕ್ಷ ಜನರಿಗೆ ಸೋಂಕು ತಗುಲಿದೆ. ಏಪ್ರಿಲ್ ನಲ್ಲಿ ಪ್ರತಿದಿನ ಎರಡು ಸಾವಿರ ಮಂದಿ ಬಲಿಯಾಗುತ್ತಿದ್ದಾರೆ. ಕಳೆದ ಗುರುವಾರ 4591, ಶುಕ್ರವಾರ 3866 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಅಮೆರಿಕ ವಿಶ್ವದಲ್ಲಿ ಒಂದೇ ದಿನ ಅತಿ ಹೆಚ್ಚು ಸಾವು ಸಂಭವಿಸಿದ ದಾಖಲೆ ಬರದಂತಾಗಿದೆ.

ಕೊರೋನಾ ತಪಾಸಣೆ ಕಿಟ್ ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸೋಂಕಿತರು ಮತ್ತು ಸಾವಿನ ಸಂಖ್ಯೆ ವೇಗವಾಗಿ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಮೃತಪಟ್ಟವರ ಸಂಖ್ಯೆಯ ಲೆಕ್ಕ ಸಿಕ್ಕಿದೆ. ಹೊರಗೆ ಮೃತಪಟ್ಟವರ ಸಂಖ್ಯೆ ಕೂಡ ಹೆಚ್ಚಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...