ವಿಯೆನ್ನಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಟ 5 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ ಅಂತಾ ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ಲಾಮಿಕ್ ಸ್ಟೇಟ್ ಬೆಂಬಲಿಗ ಎಂದು ಗುರುತಿಸಲ್ಪಟ್ಟ ಶಸ್ತ್ರಸಜ್ಜಿತ ವ್ಯಕ್ತಿಯನ್ನ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ .
ಕೋವಿಡ್ 19 ಹಿನ್ನೆಲೆ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಗೆ ಬರುವ ಕೆಲವೇ ಗಂಟೆಗಳ ಮೊದಲು ಜನರು ಸಾರ್ವಜನಿಕ ಸ್ಥಳಗಳಲ್ಲಿ ಇದ್ದುದರ ಲಾಭ ಪಡೆದ ಭಯೋತ್ಪಾದಕರು ಬಾರ್ಗಳನ್ನ ಗುರಿ ಮಾಡಿ ದಾಳಿ ನಡೆಸಿದ್ದಾರೆ ಅಂತಾ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇದರ ಶಾಕಿಂಗ್ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.