alex Certify BIG NEWS: ಶ್ವೇತಭವನದಿಂದಲೇ ಮಾಹಿತಿ ಬಹಿರಂಗ – ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶ್ವೇತಭವನದಿಂದಲೇ ಮಾಹಿತಿ ಬಹಿರಂಗ – ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ

ವಾಷಿಂಗ್ಟನ್: ಕೊರೋನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(74) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವೇತಭವನದ ಮುಖ್ಯಸ್ಥ ಮಾರ್ಕ್ ಮೆಡೋಸ್ ಅವರು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯ ಸ್ಥಿತಿ ಅಧಿಕಾರಿಗಳು ಸಾರ್ವಜನಿಕವಾಗಿ ಪ್ರಕಟಿಸಿದಕ್ಕಿಂತ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಅಧ್ಯಕ್ಷರು ಜ್ವರದಿಂದ ಬಳಲುತ್ತಿದ್ದಾರೆ. ಅವರ ರಕ್ತದ ಆಮ್ಲಜನಕ ಮಟ್ಟ ವೇಗವಾಗಿ ಕುಸಿಯುತ್ತಿದೆ ಎಂದು ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿದ್ದರೂ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಬಳಿಕ ಜ್ವರ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಮುಂದುವರೆದಿದ್ದು ರಕ್ತದ ಆಮ್ಲಜನಕ ಮಟ್ಟ ಕುಸಿಯತೊಡಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...