ಇಬ್ಬರು ಮಹಿಳಾ ನ್ಯಾಯಾಧೀಶರನ್ನು ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ನಡೆದಿದೆ. ಇಬ್ಬರು ನ್ಯಾಯಮೂರ್ತಿಗಳು ಸರ್ಕಾರಿ ಕಾರಿನಲ್ಲಿ ಕಚೇರಿಗೆ ಬರುವಾಗ ಈ ಘಟನೆ ನಡೆದಿದೆ.
ಭಾನುವಾರ ಬೆಳಿಗ್ಗೆ ಸುಪ್ರೀಂ ಕೋರ್ಟಿನ ಈ ಇಬ್ಬರು ಮಹಿಳಾ ನ್ಯಾಯಮೂರ್ತಿಗಳು ಕಚೇರಿಗೆ ಬರುತ್ತಿದ್ದಾಗ ಕಾರನ್ನು ಅಡ್ಡಗಟ್ಟಿದ ಬಂದೂಕುಧಾರಿಗಳು ಗುಂಡಿನ ಮಳೆಗರೆದಿದ್ದಾರೆ. ಇದರಿಂದಾಗಿ ನ್ಯಾಯಮೂರ್ತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ ಸಹ ಗಾಯಗೊಂಡಿರುವುದಾಗಿ ಸುಪ್ರೀಂ ಕೋರ್ಟ್ ವಕ್ತಾರ ಅಹಮದ್ ಫಹಿಂ ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ಗಣ್ಯವ್ಯಕ್ತಿಗಳನ್ನು ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ.