ಮಾಸ್ಕೋ: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಬಹುತೇಕ ಯಶಸ್ಸು ಕಂಡಿರುವ ರಷ್ಯಾ ಜನಬಳಕೆಗೆ ಕೊರೊನಾ ಲಸಿಕೆಯನ್ನು ಬಿಡುಗಡೆ ಮಾಡಲು ಮುಂದಾಗಿದೆ.
ಆಗಸ್ಟ್ 12 ರಂದು ಬುಧವಾರ ಅಧಿಕೃತ ನೋಂದಣಿ ಪ್ರಕ್ರಿಯೆ ಕೈಗೊಳ್ಳಲಿದೆ. ಈ ಹಂತ ಮುಗಿದ ಕೂಡಲೇ ಮಾರುಕಟ್ಟೆಗೆ ಲಸಿಕೆ ಬಿಡುಗಡೆಯಾಗಲು ಸಿದ್ಧವಾಗಿದೆ ಎಂದು ಹೇಳಲಾಗಿದೆ. ಜನಬಳಕೆಗೆ ಕೊರೋನಾ ಲಸಿಕೆ ಬಿಡುಗಡೆ ಮಾಡಿದ ವಿಶ್ವದ ಮೊದಲ ದೇಶ ಎನ್ನುವ ಹಿರಿಮೆಗೆ ರಷ್ಯಾ ಪಾತ್ರವಾಗಲಿದೆ.
ರಷ್ಯಾ ರಕ್ಷಣಾ ಸಚಿವಾಲಯ ಗಮಾಲೆಯ ರಿಸರ್ಚ್ ಇನ್ ಸ್ಟಿಟ್ಯೂಟ್ ಸಹಭಾಗಿತ್ವದಲ್ಲಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಜೂನ್ 18ರಂದು ಮೊದಲ ಹಂತ, ಜುಲೈ 20 ರಂದು ಎರಡನೇ ಹಂತದ ಪ್ರಯೋಗ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ ಎಂದು ಹೇಳಲಾಗಿದೆ.