ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾಷಣಕ್ಕೂ ಮುನ್ನ ಪಾಕಿಸ್ತಾನದಲ್ಲಿ ಇಂಟರ್ ನೆಟ್ ಸ್ಥಗಿತಗೊಂಡಿದೆ.
ಪಾಕಿಸ್ತಾನದಲ್ಲಿ ಇಂಟರ್ನೆಟ್ ಸೇವೆಗಳು ರಾಷ್ಟ್ರವ್ಯಾಪಿ ಅಡಚಣೆ ಎದುರಿಸಿದವು ಎಂದು ವರದಿ ತಿಳಿಸಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನ ವರ್ಚುವಲ್ ಪವರ್ ಶೋ ಮಧ್ಯೆ ಈ ಬೆಳವಣಿಗೆ ನಡೆದಿದೆ. ವರ್ಚುವಲ್ ರ್ಯಾಲಿ ರಾತ್ರಿ 9 ಗಂಟೆಗೆ ಪ್ರಾರಂಭವಾಗಬೇಕಿತ್ತು, ಆದರೆ ಇದೇ ವೇಳೆ ಇಂಟರ್ ನೆಟ್ ಸ್ಥಗಿತಗೊಂಡಿದೆ.
ಇತ್ತೀಚಿನ ಬೆಳವಣಿಗೆಯು ಇಮ್ರಾನ್ ಖಾನ್ ಅವರ ಜನಪ್ರಿಯತೆಯ ಬಗ್ಗೆ ಸರ್ಕಾರದ ಭಯವನ್ನು ತೋರಿಸುತ್ತದೆ ಎಂದು ವರದಿ ಹೇಳಿದೆ. “ಇಮ್ರಾನ್ ಖಾನ್ ಅವರ ಪಿಟಿಐ ಅಭೂತಪೂರ್ವ ಜನಪ್ರಿಯತೆಯ ಭಯಕ್ಕೆ ಇದು ಪುರಾವೆಯಾಗಿದೆ ಎಂದು ವರದಿ ಹೇಳಿದೆ.
ಮೇ ತಿಂಗಳಿನಲ್ಲಿಯೂ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು ವಿಶೇಷವೆಂದರೆ, ಕಳೆದ ವರ್ಷ ಮೇ ತಿಂಗಳಲ್ಲಿ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಖಾನ್ ಅವರನ್ನು ಬಂಧಿಸಿದ ನಂತರ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆದವು. ಘಟನೆಯ ನಂತರ, ಆಂತರಿಕ ಸಚಿವಾಲಯದ ಸೂಚನೆಯ ಮೇರೆಗೆ ಪಾಕಿಸ್ತಾನದಾದ್ಯಂತ ಮೊಬೈಲ್ ಬ್ರಾಡ್ಬ್ಯಾಂಡ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಿಟಿಎ ದೃಢಪಡಿಸಿದೆ.