alex Certify ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.

ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...