
ಹುಬ್ಬಳ್ಳಿ: ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಹುಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಗಳು ಹಳೆ ಹುಬ್ಬಳ್ಳಿಯ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ವಾಸವಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿಸ ಹಳೇ ಹುಬ್ಬಳ್ಳಿ ಠಾಣೆ ಪೊಲಿಸರು ಮೂವರನ್ನು ಬಂಧಿಸಿದ್ದಾರೆ.
ರಾಜಸ್ಥನದ ಮೂಲದ ವಿಕಾಸ್ ಬಿಷ್ಣೋಯ್, ಜೈಸಾರಾಮ್ ಚೌದರಿ, ರಾಮರಾಮ ಬಿಷ್ಣೋಯ್ ಬಾಂಧಿತರು. ಆರೋಪಿಗಳಿಂದ 23, 500 ಮೌಲ್ಯದ 46 ಗ್ರಾಂ ಅಫೀಮು ವಶಕ್ಕೆ ಪಡೆಯಲಾಗಿದೆ. ಮೂರು ಮೊಬೈಲ್, ಒಂದು ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ.