ಬೆಂಗಳೂರು: ಮುಂದಿನ ವರ್ಷದ ಫೆಬ್ರವರಿ 11 ರಿಂದ 14ರವರೆಗೆ ಇನ್ವೆಸ್ಟ್ ಕರ್ನಾಟಕ- 2025 ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಕುರಿತ ಉನ್ನತ ಅಧಿಕಾರಿಗಳು ಮತ್ತು ಕೈಗಾರಿಕಾ ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶ ಬಿಂಬಿಸಲಾಗುವುದು ಎಂದು ಹೇಳಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶ ಬಂಡವಾಳ ಹೂಡಿಕೆ, ಕೈಗಾರಿಕಾ ಕ್ಷೇತ್ರದ ಬೆಳವಣಿಗೆ, ಆರ್ಥಿಕ ಅಭಿವೃದ್ಧಿ ಸೇರಿದಂತೆ ಅನೇಕ ಉದ್ದೇಶದಿಂದ ಮಹತ್ವದ್ದಾಗಿದೆ. ಸಮಾವೇಶದಲ್ಲಿ ದೇಶವಿದೇಶಗಳ ಐದು ಸಾವಿರ ಪ್ರತಿನಿಧಿಗಳು, ತಾಂತ್ರಿಕ ಪರಿಣಿತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮುಂಬರುವ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶವು (#GIM2025) ಬಂಡವಾಳ ಹೂಡಿಕೆ, ಕೈಗಾರಿಕಾ ಬೆಳವಣಿಗೆ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಅತ್ಯಂತ ಮಹತ್ವವಿದ್ದು, ರಾಜ್ಯದ ವರ್ಚಸ್ಸು ಹೆಚ್ಚಳಕ್ಕೆ ಸದವಕಾಶವಿದೆ. ದೇಶ-ವಿದೇಶಗಳ ಸುಮಾರು 5,000 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಈ… pic.twitter.com/FpU7sil7Lw
— M B Patil (@MBPatil) November 20, 2024