alex Certify BIG BREAKING NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ತನಿಖೆ ಎನ್ಐಎಗೆ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ತನಿಖೆ ಎನ್ಐಎಗೆ ವರ್ಗಾವಣೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎಗೆ ವರ್ಗಾಯಿಸಲಾಗಿದೆ.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ತನಿಖೆ ನಡೆಸಲು, ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಯುಎಪಿಎ ಕಾಯ್ದೆ ಅನ್ವಯ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.

ಮಂಗಳೂರಿನ ಕಂಕನಾಡಿ ನಾಗುರಿ ಬಳಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ಬಂಧಿಸಲಾಗಿದೆ. ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿರುವ ಶಾರಿಕ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಕರಣದ ತನಿಖೆಯನ್ನು ಎನ್ಐಎಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯುಎಪಿಎ ಕಾಯ್ದೆ ಅನ್ವಯ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಪ್ರಕರಣದ ಸಂಬಂಧ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ, ಮಾಹಿತಿಗಳ ಆಧಾರದ ಮೇಲೆ ತನಿಖೆಯನ್ನು ಎನ್ಐಎಗೆ ವರ್ಗಾವಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...