alex Certify ಬೆಂಗಳೂರಲ್ಲಿ ಕೋಟ್ಯಂತರ ಹಣ ಪತ್ತೆ ಪ್ರಕರಣ: ಸುದೀರ್ಘ ಐಟಿ ವಿಚಾರಣೆ ಮುಗಿಸಿ ಬಂದ ಪ್ರದೀಪ್ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಕೋಟ್ಯಂತರ ಹಣ ಪತ್ತೆ ಪ್ರಕರಣ: ಸುದೀರ್ಘ ಐಟಿ ವಿಚಾರಣೆ ಮುಗಿಸಿ ಬಂದ ಪ್ರದೀಪ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಐಟಿ ವಿಚಾರಣೆ ಮುಗಿಸಿ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಹೊರಗೆ ಬಂದಿದ್ದಾರೆ.

ಬಳಿಕ ಮಾತನಾಡಿದ ಅವರು, ವಿಚಾರಣೆ ವೇಳೆ ಅಧಿಕಾರಿಗಳು ಕೇಳಿದ ದಾಖಲೆ ಒದಗಿಸಿದ್ದೇನೆ. ನಮ್ಮ ಮನೆಯಲ್ಲಿ ಪತ್ತೆಯಾದ ಹಣ ಜಮೀನಿಗೆ ಸಂಬಂಧಿಸಿದ ಹಣ. ನನಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಸ್ನೇಹಿತ ಪ್ರಮೋದ್ ಗೂ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 21ರಂದು ಪ್ರಮೋದ್ ಸಹ ವಿಚಾರಣೆಗೆ ಬರುತ್ತಾರೆ ಎಂದು ತಿಳಿಸಿದ್ದಾರೆ.

ಐಟಿ ದಾಳಿ ವೇಳೆ ಮನೆಯಲ್ಲಿ 20.02 ಕೋಟಿ ರೂ. ಹಣ ಸಿಕ್ಕಿದೆ. ಅಕ್ಟೋಬರ್ 26ರಂದು ನನಗೆ ಮತ್ತೆ ವಿಚಾರಣೆಗೆ ಬರಲು ಸೂಚಿಸಿದ್ದಾರೆ ಎಂದು ಐಟಿ ವಿಚಾರಣೆ ಬಳಿಕ ಅಂಬಿಕಾಪತಿ ಪುತ್ರ ಪ್ರದೀಪ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...