ಬೆಂಗಳೂರು : ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲಿದ್ದು, ಈ ಮೂಲಕ ಹಲವು ಉದ್ಯೋಗವಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಂಬಿ ಪಾಟೀಲ್ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಸಮ್ಮತಿ ಸೂಚಿಸಿದೆ.
ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದ ಕರ್ನಾಟಕ ಸರ್ಕಾರದ ಉನ್ನತ ಮಟ್ಟದ ನಿಯೋಗ ಜಪಾನ್ನಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಕೆಲ ಕಂಪನಿಗಳು ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಕರ್ನಾಟಕದ ಮೂಲಕ ಭಾರತದಲ್ಲಿ ತಮ್ಮ ಪ್ರಯಾಣವನ್ನು ಆರಂಭಿಸಲಿದೆ ರೆನೆಸಸ್ : ಎಂಬಿ ಪಾಟೀಲ್
ಮೈಕ್ರೋ ಕಂಟ್ರೋಲರ್ ಗಳು, ಸೆಮಿಕಂಡಕ್ಟರ್ ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪರಿಕರಗಳ ಉತ್ಪಾದನೆಯಲ್ಲಿ ಹೆಸರುವಾಸಿಯಾಗಿರುವ ರೆನೆಸಸ್ – #Renesas ಕಂಪೆನಿಯ ಉಪಾಧ್ಯಕ್ಷರಾದ ಚಾರ್ಲ್ಸ್ ಕವಾಶಿಮ ಹಾಗೂ ಹಿರಿಯ ನಿರ್ದೇಶಕರಾದ ತೋಷಿಹಿಕೊ ಇಗರಶಿ ಅವರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಸಂಶಧೋನೆ ಮತ್ತು ಅಭಿವೃದ್ಧಿ (R&D) ಕೇಂದ್ರ ಸ್ಥಾಪಿಸುವುದು ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಅವಕಾಶಗಳನ್ನು ಅನ್ವೇಷಿಸುವುದು ಸೇರಿದಂತೆ ಮುಂದಿನ ದಿನಗಳಲ್ಲಿ ದೊಡ್ಡ ಯೋಜನೆಗಳೊಂದಿಗೆ Renesas ನಮ್ಮ ರಾಜ್ಯದ ಮೂಲಕ ಭಾರತದಲ್ಲಿ ತಮ್ಮ ಪ್ರಯಾಣವನ್ನು ಆರಂಭಿಸಲಿದೆ! ಮುಂಬರುವ GIM2025, ಇನ್ವೆಸ್ಟ್ ಕರ್ನಾಟಕಕ್ಕೆ ನಾವು ಅವರನ್ನು ಆಹ್ವಾನಿಸಿದ್ದೇವೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.