ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019 ರಿಂದ 2023ರ ವರೆಗೆ ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಎರಡೂ ಪ್ರಶಸ್ತಿಗಳ ಮೊತ್ತ ತಲಾ ₹2 ಲಕ್ಷ ಆಗಿದ್ದು, ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು – 560001 ಇಲ್ಲಿಗೆ ಜುಲೈ 25ರೊಳಗೆ ಕಳುಹಿಸಬೇಕು. tsraward@gmail.com ಗೂ ಕಳುಹಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.