ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಾವ್ಯ (ವಚನಗಳು ಮತ್ತು ಹನಿಗವನಗಳು), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ, ಸಾಹಿತ್ಯ, ಜೀವನ ಚರಿತ್ರೆ, ಆತ್ಮಕತೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ, ಸಂಕೀರ್ಣ ಸೇರಿದಂತೆ 22 ವಿಭಾಗಗಳಲ್ಲಿ ಕೃತಿಗಳನ್ನು ಅಹ್ವಾನಿಸಲಾಗಿದೆ. ಜನಪದ ಪ್ರಕಾರ ಹಾಗೂ ಪಿ.ಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ಹೊರಡಿಸಲಾಗಿದೆ.
2022ನೇ ಸಾಲಿನ ಪುಸ್ತಕ ಬಹುಮಾನಕ್ಕೆ ವಿವಿಧ 22 ವಿಭಾಗಗಳಲ್ಲಿ ಕೃತಿಗಳನ್ನು ಆಹ್ವಾನಿಸಲಾಗಿದ್ದು, ಫೆಬ್ರವರಿ 20ರೊಳಗೆ ಕೃತಿಗಳನ್ನು ಕಳುಹಿಸಬಹುದಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡಿರಬೇಕು. ಆಯ್ದ ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ – 560002 ಇಲ್ಲಿಗೆ ಕಳುಹಿಸಬಹುದಾಗಿದೆ.