ಬಳ್ಳಾರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24 ನೇ ಸಾಲಿಗೆ 08 ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಡಿ ಜಿಲ್ಲೆಯ ವಿಕಲಚೇತನರಿಂದ (ಅಂಗವಿಕಲರು) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
*ಯೋಜನೆಗಳು:* ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ಶಿಶುಪಾಲನಾ ಭತ್ಯೆ.
ಮೇಲ್ಕಂಡ ಯೋಜನೆಗಳಿಗೆ ಸೇವಾಸಿಂಧು, ಗ್ರಾಮ ಒನ್ ಮತ್ತು ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ)ರಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.
ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಯಸುವ ಫಲಾನುಭವಿಗಳಿಗೆ ಸೇವಾಸಿಂಧು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ
ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು: ಬಳ್ಳಾರಿ-8880875620, ಸಿರುಗುಪ್ಪ-9743509698, ಸಂಡೂರು-9632052270, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.