ಶಿವಮೊಗ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಿದೆ.
ಸಂಚಾರಿ ಕುರಿಗಾಹಿಗಳು ನಿಗದಿತ ನಮೂನೆ ಅರ್ಜಿಗಳನ್ನು ತಮ್ಮ ವ್ಯಾಪ್ತಿಯ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ವಲಸೆ ಕುರಿಗಾಹಿಗಳು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಪಡೆದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರ ಪಶು ಚಿಕಿತ್ಸಾಲಯ, ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿಗಳು, ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.