ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಕರ್ನಾಟಕ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ ಸೈಟ್ http://www.kacdc.karnataka.gov.in ನಲ್ಲಿ ಸೆಪ್ಟೆಂಬರ್ 18 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರು ಕಛೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-32 ಅಥವಾ ದೂರವಾಣಿ ಸಂಖ್ಯೆ 9448451111,080-2353600/23539601 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬೆಂಗಳೂರು ಉತ್ತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.