alex Certify ನಾಳಿನ ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳಿನ ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ

ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದ್ದು , ಬಿಜೆಪಿಯ ಮೂವರು  ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿವಿ ಸದಾನಂದಗೌಡ ಅವರಿಗೆ ಸರ್ವಪಕ್ಷ ಸಭೆಗೆ ಆಹ್ವಾನ ನೀಡಲಾಗಿದೆ. ಪತ್ರದ ಮೂಲಕ ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿಗೆ ಆಹ್ವಾನಿಸಿದ್ದು, ಡಿ.ವಿ.ಸದಾನಂದಗೌಡಗೆ ದೂರವಾಣಿ ಮೂಲಕ ಆಹ್ವಾನ ನೀಡಲಾಗಿದೆ.

ನಾಳೆ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿಗೆ ಕೂಡ ಆಹ್ವಾನ ನೀಡಲಾಗಿದೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ ಹಲವು ವಿಚಾರವಾಗಿ ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...