alex Certify 10, 12 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: IOCL ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10, 12 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: IOCL ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿ.ನಲ್ಲಿ 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 10,2021 ರಿಂದ ಡಿಸೆಂಬರ್ 27,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ತಾಂತ್ರಿಕೇತರ ಅಪ್ರೆಂಟಿಸ್ – 245 ಹುದ್ದೆಗಳು, ತಾಂತ್ರಿಕ ಅಪ್ರೆಂಟಿಸ್ – 55 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಐಟಿಐ ವಿದ್ಯಾರ್ಹತೆ, 12ನೇ ತರಗತಿ ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು

ನವೆಂಬರ್ 30,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಒಬಿಸಿಗೆ ಗರಿಷ್ಟ 27 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು  ಅಧಿಕೃತ ವೆಬ್‌ಸೈಟ್‌ https://iocl.com/apprenticeships ಗೆ ಭೇಟಿ ನೀಡಿ ಮಾಹಿತಿ ಪಡೆದು, ಅರ್ಜಿ ಸಲ್ಲಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...