ಐಪಿಎಲ್ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆ ನಿಗದಿಯಂತೆ ಡಿಸೆಂಬರ್ 23 ರಿಂದಲೇ ನಡೆಯಲಿದೆ. ಈಗಾಗಲೇ ಇದಕ್ಕೆ ಸಕಲ ಸಿದ್ಧತೆಗಳು ನಡೆದಿದೆ.
ಡಿಸೆಂಬರ್ 23ರಂದು ಹರಾಜು ಪ್ರಕ್ರಿಯೆ ಆರಂಭ ಮಾಡಲು ಬಿಸಿಸಿಐ ಮುಂದಾಗಿದ್ದ ಕಾರಣ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಇದರಲ್ಲಿ ಹಾಜರಾಗಲು ವಿದೇಶಿ ಕೋಚ್ ಗಳು ಹಿಂದೇಟು ಹಾಕಿದ್ದರು.
ಹೀಗಾಗಿ ಹರಾಜು ಪ್ರಕ್ರಿಯೆಯನ್ನು ಮುಂದೂಡುವಂತೆ ವಿವಿಧ ತಂಡಗಳ ಮಾಲೀಕರು ಬಿಸಿಸಿಐಗೆ ಮನವಿ ಮಾಡಿದ್ದರು. ಆದರೆ ಈಗಾಗಲೇ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿರುವ ಕಾರಣ ಡಿಸೆಂಬರ್ 23 ರಿಂದಲೇ ಹರಾಜು ಪ್ರಕ್ರಿಯೆ ನಡೆಯಲಿದೆ. ಆದರೆ ವಿದೇಶಿ ಸಿಬ್ಬಂದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇದರಲ್ಲಿ ಹಾಜರಾಗಲು ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.