alex Certify IPL 2022: ಪುಣೆಯಿಂದ ಮುಂಬೈಗೆ ಸ್ಥಳಾಂತರಗೊಂಡ ಡೆಲ್ಲಿ VS ರಾಜಸ್ಥಾನ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL 2022: ಪುಣೆಯಿಂದ ಮುಂಬೈಗೆ ಸ್ಥಳಾಂತರಗೊಂಡ ಡೆಲ್ಲಿ VS ರಾಜಸ್ಥಾನ ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಲವರಿಗೆ ಕೋವಿಡ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ.

ಡೆಲ್ಲಿ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಪುಣೆಯ ಎಂಸಿಎ ಮೈದಾನದಲ್ಲಿ ನಿಗದಿಯಾಗಿತ್ತು. ಆದರೆ ಡೆಲ್ಲಿ ತಂಡದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಂದ್ಯವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಡೆಲ್ಲಿ ತಂಡದಲ್ಲಿ ಆರನೇ ಕೋವಿಡ್ ಪ್ರಕರಣ ಇದಾಗಿದ್ದು ನ್ಯೂಜಿಲೆಂಡ್ ವಿಕೆಟ್ ಕೀಪರ್ ಬ್ಯಾಟರ್ ಟಿಮ್ ಸೀಫರ್ಟ್ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಡೆಲ್ಲಿ ತಂಡದ ಆಟಗಾರರಿಗೆ ಎರಡು ಸುತ್ತಿನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಪಂಜಾಬ್ ವಿರುದ್ಧದ ಪಂದ್ಯ ನಿಗದಿಯಂತೆ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

ಈ ಮೊದಲು ಡೆಲ್ಲಿ ಮತ್ತು ಪಂಜಾಬ್ ನಡುವಿನ ಪಂದ್ಯವನ್ನು ಪುಣೆಯಿಂದ ಮುಂಬೈನ ಬೆಬೋರ್ನ್ ಮೈದಾನಕ್ಕೆ ಸ್ಥಳಾಂತರಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...