ನಿನ್ನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜೊತೆ ಲಕ್ನೋ ಸೂಪರ್ ಜೈಂಟ್ಸ್ 21 ರನ್ ಗಳಿಂದ ಜಯಬೇರಿಯಾಗಿದೆ. ಸಂಕಷ್ಟದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಸರೆಯಾದ ಯುವ ಪ್ರತಿಭೆ ಮಾಯಾಂಕ್ ಯಾದವ್ ಪಂದ್ಯದ ದಿಕ್ಕನ್ನೇ ಬದಲಾಯಿಸಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಇಂದು ಎರಡು ಪಂದ್ಯಗಳಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಈ ಬಾರಿ ಋತುರಾಜ್ ಗಾಯಕ್ವಾಡ್ ನಾಯಕರಾಗಿದ್ದರು ಎಂ ಎಸ್ ಧೋನಿಯವರ ನಿರ್ಧಾರದ ನಂತರವೇ drs ತೆಗೆದುಕೊಳ್ಳಲು ಮುಂದಾಗುತ್ತಾರೆ. ಎಂ ಎಸ್ ಧೋನಿ ಎಷ್ಟೋ ಯುವ ಕ್ರಿಕೆಟಿಗರಿಗೆ ರೋಲ್ ಮಾಡಲಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ ತಂಡದ ನಾಯಕ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ರಿಷಬ್ ಪಂತ್ ಕೂಡ ಧೋನಿಯವರ ಅಪ್ಪಟ ಅಭಿಮಾನಿಯಾಗಿದ್ದು, ಅವರಿಂದಲೇ ಸಾಕಷ್ಟು ಪಾಠಗಳನ್ನು ಕಲಿತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವದಲ್ಲಿ ಬದಲಾವಣೆಯಾಗಿದ್ದರು ಇದು ಗುರು ಶಿಷ್ಯರ ಕಾಳಗವೆಂದೆ ಹೇಳಬಹುದಾಗಿದೆ.