ನಿನ್ನೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಮನೆ ಅಂಗಳದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಆರು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್ ತಂಡಕ್ಕೆ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ ಸೇರ್ಪಡೆಯಾದಗಿನಿಂದ ಆನೆ ಬಲ ಬಂದಂತಾಗಿದೆ. ಈ ಬಾರಿಯ ಐಪಿಎಲ್ ಹೊಸ ರೀತಿಯಲ್ಲೇ ಕಾಣಿಸುತ್ತಿದೆ.
ಇಂದು ಜೈಪುರ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಮುಖಮುಖಿಯಾಗಲಿವೆ. ಈಗಾಗಲೇ ರಾಜಸ್ಥಾನ್ ರಾಯಲ್ಸ್ ತಂಡ ಸತತ ಮೂರು ಪಂದ್ಯಗಳಲ್ಲೂ ಜಯಭೇರಿ ಸಾಧಿಸುವ ಮೂಲಕ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚುತ್ತಿದ್ದಾರೆ. ಆರ್ಸಿಬಿ ತಂಡ ಸತತ ಸೋಲಿನಿಂದ ಕಂಗೆಟ್ಟಿದ್ದು, ಜಯದ ಹುಡುಕಾಟದಲ್ಲಿದೆ. ಇದು ಆರ್ಸಿಬಿಯ ಹೊಸ ಅಧ್ಯಾಯ ಎಂದಿದ್ದ ತಂಡ ತನ್ನ ಕಳಪೆ ಪ್ರದರ್ಶನದಿಂದ ಟೀಕೆಗೆ ಗುರಿಯಾಗಿದೆ.