
ಈ ಬಾರಿ ಐಪಿಎಲ್ ನಲ್ಲಿ ಯುವ ಆಟಗಾರರು ಮತ್ತು ತಂಡಗಳು ಹೊಸ ದಾಖಲೆ ಬರೆಯುತ್ತಿದ್ದು, ಎಲ್ಲಾ ಪಂದ್ಯಗಳು ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯುತ್ತಿವೆ. ಇಂದು ಹೈದರಾಬಾದ್ ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದ್ದು ಕಾತುರದಿಂದ ಕಾಯುತ್ತಿದ್ದಾರೆ.
ಈ ಬಾರಿ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಇದೇ ಮೈದಾನದಲ್ಲಿ 277 ರನ್ಗಳ ಬೃಹತ್ ಮೊತ್ತ ದಾಖಲಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದು, ಇಂದು ಅಂತದ್ದೇ ಮತ್ತೊಂದು ಪಂದ್ಯದ ನಿರೀಕ್ಷೆಯಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೋಲು ಕಂಡಿದ್ದು, ಇಂದು ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ಎಂ ಎಸ್ ಧೋನಿ ಅವರ ಮಾರ್ಗದರ್ಶನವಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾವುದೇ ಪಿಚ್ ನಲ್ಲೂ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗಿರುತ್ತದೆ.