alex Certify IPL ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ ಹರಾಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ ಹರಾಜು

ಐಪಿಎಲ್ ಹದಿನಾರನೇ ಸರಣಿಯ ನಿರೀಕ್ಷೆಯಲ್ಲಿ ಇರುವವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ಹರಾಜು ನಡೆಯಲಿದ್ದು, ಈ ಬಾರಿಯ ಐಪಿಎಲ್ ಪಂದ್ಯಗಳು ಭಾರತದಲ್ಲಿಯೇ ನಡೆಯಲಿವೆ.

ಐಪಿಎಲ್ ತಂಡಗಳನ್ನು ಖರೀದಿಸುವ ಫ್ರಾಂಚೈಸಿಗಳಿಗೆ ಒಟ್ಟು ರೂ.95 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದ್ದು, ಕಳೆದ ಐಪಿಎಲ್ ಗಿಂತ ಈ ಬಾರಿ 5 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಖರ್ಚು ಮಾಡಲು ಅವಕಾಶ ನೀಡಲಾಗಿದೆ.

ಈ ಹಿಂದೆ ವಿದೇಶಗಳಲ್ಲೂ ಐಪಿಎಲ್ ಪಂದ್ಯಾವಳಿಗಳು ನಡೆದಿದ್ದು, ಆದರೆ ಈ ಬಾರಿ ಭಾರತದಲ್ಲಿಯೇ ಪಂದ್ಯಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ 2023ರ ಮಾರ್ಚ್ ಕೊನೆಯ ವಾರದಿಂದ ಐಪಿಎಲ್ ಪಂದ್ಯಗಳು ನಡೆಯಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...