ಚಿತ್ರದುರ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಿಮ್ಮೇಗೌಡ ಮತ್ತು ಶಶಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ 1.2 ಲಕ್ಷ ರೂಪಾಯಿ ನಗದು, ಎರಡು ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಿರಿಯೂರಿನ ರಾಮಮಂದಿರ ಸರ್ಕಲ್ ಸಮೀಪ ಮೊಬೈಲ್ ನಲ್ಲಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಬೆಟ್ಟಿಂಗ್ ಆಡಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ನಗರ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.