ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದ ಜಯನಗರ ಠಾಣಾ ವ್ಯಾಪ್ತಿಯ ತಿಲಕ್ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್ನಲ್ಲಿರುವ ಮೊಬೈಲ್ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ದಾಖಲಿಸಿ, ಆರೋಪಿಗಳನ್ನು ದಸ್ತಗಿರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತ ಅಜೇಯ ಬಿನ್ ಯಲ್ಲೋಜಿರಾವ್, 35ವರ್ಷ, ಮೊಬೈಲ್ ಅಂಗಡಿ ಮಾಲೀಕ ವಾಸ: 1ನೇ ತಿರುವು ಶಾಂತಿನಗರ , ರಾಗಿಗುಡ್ಡ, ಶಿವಮೊಗ್ಗ. ಕಿರಣ ಬಿನ್ ಹನುಮಂತಪ್ಪ, 32ವರ್ಷ, ಪೈನಾನ್ಸ್ ನಲ್ಲಿ ಕೆಲಸ ವಾಸ: ದ್ರೌಪದಮ್ಮ ಸರ್ಕಲ್ ಹತ್ತಿರ, 1ನೇ ತಿರುವು ಗೋಪಾಳ, ಶಿವಮೊಗ್ಗ ಮತ್ತು ಸಂದೀಪ್ ಬಿನ್ ವಿಠಲ್ ರಾವ್, 28ವರ್ಷ, ಮೊಬೈಲ್ ಅಂಗಡಿಯಲ್ಲಿ ಕೆಲಸ ವಾಸ: 1ನೇ ತಿರುವು,ರಾಗಿಗುಡ್ಡ, ಶಿವಮೊಗ್ಗ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ.