ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿ.ಎಂ. ಲಕ್ಷ್ಮಿ ಪ್ರಸಾದ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿ ಆಗಿದ್ದರು.
ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ಡಾ. ಅನೂಪ್ ಶೆಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.