ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಡಾ.ಕೆ. ರಾಮಚಂದ್ರರಾವ್ –ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ
ಜೆ. ಅರುಣ್ ಚಕ್ರವರ್ತಿ –ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ
ವಿಕಾಸ್ ಕುಮಾರ್ ವಿಕಾಶ್- ಐಜಿಪಿ, ಉತ್ತರ ವಲಯ, ಬೆಳಗಾವಿ