alex Certify BIG NEWS: ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಗೆ ಬೆಚ್ಚಿಬಿದ್ದ ಪಾಕಿಸ್ತಾನ: ಇರಾನ್ ನಿಂದ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಗೆ ಬೆಚ್ಚಿಬಿದ್ದ ಪಾಕಿಸ್ತಾನ: ಇರಾನ್ ನಿಂದ ಬಿಗ್ ಶಾಕ್

ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಪಾಕಿಸ್ತಾನದ ಮೇಲೆ ಇರಾನ್ ನಿಂದ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದ್ದು, ಇಬ್ಬರು ಸೈನಿಕರನ್ನು ರಕ್ಷಿಸಲು ಬಲೂಚಿಸ್ತಾನದಲ್ಲಿ ದಾಳಿ ಮಾಡಲಾಗಿದೆ.

ಜೈಷ್ ಉಲ್ ಅಡ್ಲ್ ಉಗ್ರರ ಮೇಲೆ ದಾಳಿ ನಡೆಸಲಾಗಿದೆ. ಉಗ್ರರ ವಶದಲ್ಲಿದ್ದ ನಮ್ಮ ಇಬ್ಬರು ಸೈನಿಕರನ್ನು ರಕ್ಷಿಸಲಾಗಿದೆ ಎಂದು ಇರಾನ್ ಸರ್ಕಾರದಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಇರಾನ್ ದಾಳಿಯಿಂದಾಗಿ ಪಾಕಿಸ್ತಾನಕ್ಕೆ ಅಪಾರ ನಷ್ಟ ಉಂಟಾಗಿದೆ.

ಬುಧವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಹಲವಾರು ಪಾಕಿಸ್ತಾನಿ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇರಾನ್ ಎಲೈಟ್ ರೆವಲೂಷನರಿ ಗಾರ್ಡ್ಸ್(ಐ.ಆರ್.ಜಿ.ಸಿ.) ನೀಡಿದ ಮಾಹಿತಿಯಂತೆ ಎರಡೂವರೆ ವರ್ಷಗಳ ಹಿಂದೆ ಜೈಷ್ ಉಲ್ ಅಡ್ಲ್ ಸಂಘಟನೆಯಿಂದ ಒತ್ತೆಯಾಳುಗಳಾಗಿ ಕರೆದೊಯಲ್ಪಟ್ಟಿದ್ದ ಇಬ್ಬರು ಅಪಹರಣಕ್ಕೊಳಗಾದ ಗಡಿಭದ್ರತಾ ಪಡೆಯ ಕಾವಲುಗಾರರನ್ನು ರಕ್ಷಿಸಲಾಗಿದೆ. ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ರಕ್ಷಿಸಲ್ಪಟ್ಟ ಸೈನಿಕರನ್ನು ಇರಾನ್ ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.

ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...