ಇರಾನಿನ Qom ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯರು ವಿದ್ಯೆ ಕಲಿಯಲು ಶಾಲೆಗೆ ಬರಬಾರದೆಂಬ ಕಾರಣಕ್ಕೆ ವಿಷವಿಕ್ಕಲಾಗಿದ್ದು, ನವೆಂಬರ್ ನಿಂದ ಈಚೆಗೆ ನೂರಾರು ಪ್ರಕರಣಗಳು ಬೆಳಕಿಗೆ ಬಂದ ನಂತರ ಸತ್ಯ ಸಂಗತಿ ಬಹಿರಂಗವಾಗಿದೆ.
ಭಾನುವಾರದಂದು ಆರೋಗ್ಯ ಸಚಿವ ಯೂನಸ್ ಪನಾಹಿ ಅವರೇ ಈ ಮಾಹಿತಿಯನ್ನು ನೀಡಿದ್ದು, ಬಹುತೇಕ ವಿದ್ಯಾರ್ಥಿನಿಯರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡುಬಂದ ಬಳಿಕ ಪರೀಕ್ಷೆ ನಡೆಸಿದ ವೇಳೆ ಈ ವಿಷಯ ತಿಳಿದು ಬಂದಿದೆ ಎಂದಿದ್ದಾರೆ.
ಆದರೆ ಯಾವ ತಂಡ ಅಥವಾ ವ್ಯಕ್ತಿ ಈ ಕೃತ್ಯ ನಡೆಸಿದ್ದಾರೆ ಎಂಬ ಸಂಗತಿಯನ್ನು ಅವರು ಬಹಿರಂಗಪಡಿಸಿಲ್ಲ. ಶಾಲೆಗೆ ಹೋದ ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ಅಸ್ವಸ್ಥಗೊಳ್ಳುವ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೋಷಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.