ನವದೆಹಲಿ: ಭಾರತೀಯ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ 60 ದಿನಗಳ ಮೊದಲೇ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಿದೆ.
120 ದಿನಗಳ ಬದಲು ಇನ್ಮುಂದೆ 60 ದಿನಗಳ ಮೊದಲು ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಬಹುದು. ಈ ಹೊಸ ನಿಯಮ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ.
IRCTC ಬುಕ್ಕಿಂಗ್ ಪ್ರಕಾರ ರೈಲ್ವೆ ಟಿಕೆಟ್ ಗಳ ಮುಂಗಡ ಕಾಯ್ದಿರಿಸುವಿಕೆಯ ಅವಧಿ 120 ದಿನಗಳಿಂದ 60 ದಿನಗಳಿಗೆ ಇಳಿಸಲಾಗಿದೆ. ನವೆಂಬರ್ 1ರಿಂದ ಈ ನಿಯಮ ಆರಂಭವಾಗಲಿದ್ದು, ಟಿಕೆಟ್ ರಹಿತ ಪ್ರಯಾಣಕ್ಕೆ ರೈಲ್ವೆ ಇಲಾಖೆ ಕಡಿವಾಣ ಹಾಕಿದೆ.